ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುಸಿದು ಬಿದ್ದು ನಿಧನ

ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುಸಿದು ಬಿದ್ದು ನಿಧನ

ಕೋಲ್ಕತ್ತಾ: ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಸಂಗೀತ ಕಾರ್ಯಕ್ರಮವೊಂದರ ನಂತರ ಕುಸಿದು ಬಿದ್ದು ನಿಧನರಾಗಿದ್ದಾರೆ. ನಿನ್ನೆ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. 

ನಿನ್ನೆ ಮಂಗಳವಾರ ಸಂಜೆ ಕೋಲ್ಕತ್ತಾದ ನಜ್ರುಲ್ ಮಂಚಾ ಆಡಿಟೋರಿಯಂನಲ್ಲಿ ಕೃಷ್ಣಕುಮಾರ್ ಅವರು ಒಂದು ಗಂಟೆ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಆಗ ಚೈತನ್ಯದಿಂದಲೇ ಇದ್ದ ಅವರು ನಂತರ ಅಲ್ಲಿಂದ ತಾವು ತಂಗಿದ್ದ ಹೊಟೇಲ್ ಕೋಣೆಗೆ ಹೋಗಿದ್ದಾರೆ. ಅಲ್ಲಿ ಮೆಟ್ಟಿಲು ಹತ್ತುವಾಗ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಕುಸಿದು ಬಿದ್ದಿದ್ದನ್ನು ಕಂಡ ಸ್ಥಳೀಯರು ಅವರನ್ನು ದಕ್ಷಿಣ ಕೋಲ್ಕತ್ತಾದ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ವೈದ್ಯರು ಕೃಷ್ಣಕುಮರ್ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಕೆಕೆ ಎಂದೇ ಪ್ರಸಿದ್ಧಿಯಾಗಿದ್ದ ಅವರಿಗೆ 54 ವರ್ಷ ವಯಸ್ಸಾಗಿತ್ತು.