ರಾಜ್ಯದಲ್ಲಿ ಇಂದಿನಿಂದ ಬೂಸ್ಟರ್ ಡೋಸ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಬೂ ಸ್ಟರ್ ಡೋಸ್ ಲಸಿಕೆ ನೀಡಲಾಗುತ್ತದೆ. ಹಂತ-ಹಂತವಾಗಿ ಬೂಸ್ಟರ್ ಡೋಸ್ ನೀಡಲು ಸರ್ಕಾರ ನಿರ್ಧರಿಸಿದೆ. ಎಲ್ಲಾ ಸರ್ಕಾರಿ ಲಸಿಕಾಕರಣ ಕೇಂದ್ರಗಳಲ್ಲಿ, ಸರ್ಕಾರದ ಆಸ್ಪತ್ರೆ, ಪಾಲಿಕೆ ಪ್ರಾಥಮಿಕ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ದೊರೆಯಲಿದೆ. ಕೋವಿನ್ ಪೋರ್ಟಲ್ ನಲ್ಲಿ ನೊಂದಾಯಿಸಿದಂತೆ ಎರಡು ಡೋಸ್ ಪಡೆದಿರಬೇಕು.ಇದಾದ 9 ತಿಂಗಳ ಬಳಿಕ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಮೊದಲನೇಯದಾಗಿ ಆರೋಗ್ಯ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟು ಕೋಮಾರ್ಬಿಡಿಟೀಸ್ ಸಮಸ್ಯೆ ಇರುವವರಿಗೆ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತದೆ.