ಬ್ರೇಕಿಂಗ್ : ರಾಜ್ಯದ 75 ಕಡೆ ಎಸಿಬಿ ರೇಡ್

ಬೆಂಗಳೂರು ಸೇರಿದಂತೆ ರಾಜ್ಯದ 75 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಆದಾಯಕ್ಕಿಂತಲೂ ಹೆಚ್ಚು ಆಸ್ತಿಗಳಿಕೆ ಆಧಾರದ ಮೇಲೆ 18 ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮುಂದುವರೆಸಿದ್ದಾರೆ. ಇನ್ನು ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿಗೆ ಅಕ್ರಮ ಆಸ್ತಿಗಳಿಸಿದವರಿಗೆ ಟೆನ್ಶನ್ ಶುರುವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.