ಬ್ರೇಕಿಂಗ್ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ನಾಲ್ವರು ದುರ್ಮರಣ

ಬ್ರೇಕಿಂಗ್ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ನಾಲ್ವರು ದುರ್ಮರಣ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಬಳಿ ಕೆಎಸ್ ಆರ್ ಟಿಸಿ ಬಸ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅತೀ ವೇಗದಲ್ಲಿ ಬಂದ ಕಾರು ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೃತರೆಲ್ಲಾ ಬೇಲೂರಿನ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬೇಲೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.