ಬ್ರೇಕಿಂಗ್: ಬಿಜೆಪಿ ಮುಖಂಡ ಆತ್ಮಹತ್ಯೆ

ಬೆಂಗಳೂರು: ನಗರದ ಬ್ಯಾಡರಹಳ್ಳಿಯಲ್ಲಿ ಬಿಜೆಪಿ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೇರೊಹಳ್ಳಿ ವಾರ್ಡ್‌ನ ಬಿಜೆಪಿ ಮುಖಂಡರಾಗಿದ್ದ ಅನಂತರಾಜು (45) ಬ್ಯಾಡರಹಳ್ಳಿಯ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಮನನೊಂದಿದ್ದ ಅನಂತರಾಜು ಸಾವಿಗೆ ಶರಣಾಗಿದ್ದಾರೆ ಎಂಬ ಮಾಹಿತಿ ಇದೆ. ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.