ಬ್ರೇಕಿಂಗ್: ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸಿಎಂ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ನಾಳೆ ಬುಧವಾರದಿಂದ ಮೂರು ದಿನಗಳವರೆಗೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಈ ಆದೇಶ ನೀಡಿದ್ದಾರೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.