ಬ್ರೇಕಿಂಗ್ : ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಗೆ ಲಘು ಹೃದಯಾಘಾತ : ಆಸ್ಪತ್ರೆಗೆ ದಾಖಲು

ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕೆಸಿಆರ್ ಗೆ ಯಾವುದೇ ರೀತಿಯ ಹೃದಯ ಸಂಬಂಧಿ ಸಮಸ್ಯೆ ಇಲ್ಲ ಎಂದು ಯಶೋಧಾ ಆಸ್ಪತ್ರೆಯ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಮುಖ್ಯಮಂತ್ರಿ ಕೆ.ಚಂದ್ರಶೇಖರ್ ಅವರು ಯಶೋಧಾ ಆಸ್ಪತ್ರೆಗೆ ದಾಖಲಾದ ನಂತರ ತೆಲಂಗಾಣ ಹಣಕಾಸು ಸಚಿವ ಹರೀಶ್ ರಾವ್, ಸಚಿವ ಕೆಟಿಆರ್ ದಿಢೀರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿರುವುದಾಗಿ ತಿಳಿದು ಬಂದಿದೆ.