ಕರ್ನಾಟಕ ಲೋಕಾಯುಕ್ತರಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ನೇಮಕ

ಬೆಂಗಳೂರು: ಕರ್ನಾಟಕದ ಉಪಲೋಕಾಯುಕ್ತರಾಗಿರುವ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಬುಧವಾರ ಬೆಳಗ್ಗೆ ನೂತನ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ನಂತರ ತೆರವಾಗಿರುವ ಸ್ಥಾನಕ್ಕೆ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರಕಾರ ಬಿ.ಎಸ್. ಪಾಟೀಲ್ ಅವರಿಗೆ ಪದೋನ್ನತಿ ನೀಡಿದ್ದು, ಸರಕಾರದ ಶಿಫಾರಸಿಗೆ ರಾಜ್ಯಪಾಲರಾದ ಗೆಹಲೋಟ್ ಅವರು ಸಹಿ ಹಾಕಿದ್ದಾರೆ. ಬುಧವಾರ ಬೆಳಗ್ಗೆ 9:45 ಕ್ಕೆ ರಾಜ ಭವನದಲ್ಲಿ 9ನೇ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನ್ಯಾ.ಬಿ.ಎಸ್.ಪಾಟೀಲ್ 14 ವರ್ಷಗಳ ಕಾಲ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೂ ಮುನ್ನ ಅವರು 20 ವರ್ಷಗಳ ಕಾಲ ವಕೀಲರಾಗಿದ್ದರು. 2019ರ ನವೆಂಬರ್ನಲ್ಲಿ ಇವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.