ಧಾರವಾಡ: ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ದಿನಾಂಕ, ಸಮಯ, ತಿಳಿಯಲು 1902ಗೆ ಕರೆಮಾಡಿ ಅಥವಾ 8147500500ಗೆ ಮೆಸೇಜ್ ಮಾಡಿ

ಧಾರವಾಡ: ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ದಿನಾಂಕ, ಸಮಯ, ತಿಳಿಯಲು 1902ಗೆ ಕರೆಮಾಡಿ ಅಥವಾ 8147500500ಗೆ ಮೆಸೇಜ್ ಮಾಡಿ

ಧಾರವಾಡ: ಗೃಹಲಕ್ಷ್ಮೀ ಯೋಜನೆ ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ 2,000 ಹಣ ಜಮೆ ಮಾಡಲಾಗುತ್ತದೆ. ಗೃಹಲಕ್ಷ್ಮೀ ಯೋಜನೆಯು ಜುಲೈ 19 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಧೀಕೃತವಾಗಿ ಚಾಲನೆಗೊಂಡಿದೆ. ಪ್ರತಿ ಫಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902 ಗೆ ಕಾಲ್ ಮಾಡಿ ಅಥವಾ 8147500500 ನಂಬರ್‌ಗೆ ಎಸ್‍ಎಂಎಸ್ ಮೂಲಕ ಸಂದೇಶ ಕಳುಹಿಸಿ, ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. 

ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಕೇಂದ್ರಗಳು ಅರ್ಜಿ ಸಲ್ಲಿಸುವ ಕೇಂದ್ರಗಳಾಗಿರುತ್ತವೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ ಹಾಗೂ ಯೋಜನೆ ನೋಂದಣಿ ಸಂಪೂರ್ಣ ಉಚಿತವಾಗಿರುತ್ತದೆ. ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅಂವಲಂಬಿತರಾಗದೇ ಅರ್ಜಿಯನ್ನು ಸ್ವತಃ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಕುಟುಂಬದ ಯಜಮಾನಿಗೆ ನೋಂದಣಿ ದಿನಾಂಕ, ಸಮಯ ಮತ್ತು ಸ್ಥಳದ ವಿವರವನ್ನು ಎಸ್‍ಎಂಎಸ್ ಮೂಲಕ ತಿಳಿಸಲಾಗುವುದು. ಈ ಯೋಜನೆಯ ನೋಂದಣಿಗೆ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ಸರ್ಕಾರ ನಿಗದಿಪಡಿಸಿರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.