ಬ್ರೇಕಿಂಗ್: ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ

ಬೆಂಗಳೂರು: ಈಗಾಗಲೇ ಇ.ಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಈ ಮೂಲಕ ಡಿ.ಕೆ ಶಿವಕುಮಾರ್‌ಗೆ ಬಿಗ್ ಶಾಕ್ ನೀಡಿದ್ದಾರೆ.
ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೊಲೀಸರ ಜತೆಗೆ ತೆರಳಿದ್ದಾರೆ.