ಮತ್ತೆ ಚೀನಾದ 54 ಆ್ಯಪ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ದೇಶದಲ್ಲಿ ಮತ್ತೆ ಚೀನಾ ಆ್ಯಪ್‌ಗಳನ್ನು ನಿಷೇಧಸಲಾಗಿದೆ. ಈ ಹಿಂದೆ 2 ಬಾರಿ ಚೀನಾ ಆ್ಯಪ್ ಗಳನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರ ಇದೀಗ ಮೂರನೇ ಬಾರಿಗೆ 54 ಚೀನಾ ಮೂಲದ ಆ್ಯಪ್ ಗಳನ್ನು ನಿಷೇಧಿಸಿದೆ ಎಂದು ತಿಳಿದುಬಂದಿದೆ. ರತದ ಭದ್ರತೆಗೆ ಹೆಚ್ಚಿನ ಅಪಾಯವನ್ನುಂಟು ಮಾಡುವ ಚೀನಾದ 54 ಮೊಬೈಲ್ ಆ್ಯಪ್‌ಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 2020ರಲ್ಲಿ ಚೀನಾದ 118 ಮೊಬೈಲ್ ಆ್ಯಪ್ಗಳ ಬಳಕೆಯನ್ನು ಭಾರತದಲ್ಲಿ ನಿಷೇಧಿಸಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೆ 54 ಆ್ಯಪ್‌ಗಳನ್ನು ನಿಷೇಧಿಸಲಿದೆ. ಇದೀಗ ನಿಷೇಧಿಸಲ್ಪಟ್ಟ ಆ್ಯಪ್ಗಳಲ್ಲಿ, ಬ್ಯೂಟಿ ಕ್ಯಾಮರಾ, ಸ್ವೀಟ್ ಸೆಲ್ಫೀ ಎಚ್ಡಿ, ಬ್ಯೂಟಿ ಕ್ಯಾಮರಾ-ಸೆಲ್ಫಿ ಕ್ಯಾಮರಾ, ಈಕ್ವಲೈಜರ್ ಮತ್ತು ಬಾಸ್ ಬೂಸ್ಟರ್, ಕ್ಯಾಮ್ ಕಾರ್ಡ್ ಫಾರ್ ಸೇಲ್ಸ್ ಫೋರ್ಸ್ ಎಂಟ್, ಐಸೊಲ್ಯಾಂಡ್ 2: ಆಶಸ್ ಆಫ್ ಟೈಮ್ ಲೈಟ್, ವಿವಾ ವಿಡಿಯೋ ಎಡಿಟರ್, ಆ್ಯಪ್ಲಾಕ್, ಡ್ಯುಯೆಲ್ ಸ್ಪೇಸ್ ಲೈಟ್, Tencent Xriver, Onmyoji Chess, Onmyoji Arena ಗಳು ಕೂಡ ಸೇರಿವೆ. ಈ ಮೇಲಿನ ಪ್ರಮುಖ ಆ್ಯಪ್ಗಳು ಸೇರಿ 54 ಚೀನಾದ ಮೊಬೈಲ್ ಅಪ್ಲಿಕೇಶನ್ಗಳನ್ನು ಭಾರತದಲ್ಲಿ ನಿರ್ಬಂಧಿಸುವಂತೆ ಕೇಂದ್ರ ಎಲೆಕ್ಟ್ರಾನಿಕ್ ಮತ್ತು ಐಟಿ ಸಚಿವಾಲಯ ಆ್ಯಪ್ ಸ್ಟೋರ್ ಮತ್ತು ಪ್ಲೇ ಸ್ಟೋರ್ಗಳಿಗೆ ಸೂಚನೆ ನೀಡಿದೆ. ಇವು ಭಾರತೀಯರ ಮಾಹಿತಿ ರಕ್ಷಣೆ ಸರಿಯಾಗಿ ಮಾಡುತ್ತಿಲ್ಲ. ಈ ಮೂಲಕ ಭಾರತೀಯರ ಭದ್ರತೆಗೆ ಧಕ್ಕೆ ತರುತ್ತಿವೆ. ಹಾಗಾಗಿ ಕೂಡಲ ಈ ಎಲ್ಲ ಆ್ಯಪ್ಗಳನ್ನೂ ಭಾರತದಲ್ಲಿ ನಿಷೇಧಿಸಲಾಗುವುದು ಎಂದು ಕೇಂದ್ರ ಇಲಾಖೆ ಹೇಳಿದೆ.