ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ : ಕೆಇಎ ಎಡವಟ್ಟು - ಪರೀಕ್ಷೆ ಕೇಂದ್ರ ಸಿಗದೆ ವಿದ್ಯಾರ್ಥಿಗಳ ಪರದಾಟ

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ : ಕೆಇಎ ಎಡವಟ್ಟು - ಪರೀಕ್ಷೆ ಕೇಂದ್ರ ಸಿಗದೆ ವಿದ್ಯಾರ್ಥಿಗಳ ಪರದಾಟ

ಬೆಂಗಳೂರು: ರಾಜ್ಯದಲ್ಲಿ ಇಂದು ಹಾಗೂ ನಾಳೆ ಎರಡು ದಿನಗಳ ಕಾಲ ಸಿಇಟಿ ಪರೀಕ್ಷೆ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಮಧ್ಯೆ ಸಿಇಟಿ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳ ಪರೀಕ್ಷಾ ಕೇಂದ್ರ ನಿಗದಿಪಡಿಸುವಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಎಡವಟ್ಟು ಮಾಡಿದೆ. ಕೆಲವು ವಿದ್ಯಾರ್ಥಿಗಳ ಹಾಲ್ ಟಿಕೆಟ್ ಸಿಗದೆ ಸಮಸ್ಯೆಯಾಗಿದ್ದರೆ, ಇನ್ನು ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷೆ ಕೇಂದ್ರಗಳ ಪರದಾಟಕ್ಕೆ ಕಾರಣವಾಗಿದೆ. 

ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 737 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಪರೀಕ್ಷೆ ನಡೆಯಲಿದೆ. ಇಂದು (ಗುರುವಾರ) ಜೀವಶಾಸ್ತ್ರ ಮತ್ತು ಗಣಿತ ಪರೀಕ್ಷೆ, ನಾಳೆ (ಶುಕ್ರವಾರ) ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿವೆ. ಬೆಳಿಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 2.30ಕ್ಕೆ ಪರೀಕ್ಷೆ ಆರಂಭವಾಗಲಿದೆ. ಅಭ್ಯರ್ಥಿಗಳು ಪರೀಕ್ಷೆ ನಡೆಯುವ ಅರ್ಧ ಗಂಟೆ ಮುಂಚಿತವಾಗಿಯೇ ಹಾಜರಿರಬೇಕು. 

ಬೆಳಿಗ್ಗೆ 10.40 ಮತ್ತು ಮಧ್ಯಾಹ್ನ 2.40ಕ್ಕೆ ಮೂರನೇ ಬಾರಿಗೆ ಬೆಲ್‌ ಬಾರಿಸಿದ ಬಳಿಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ. ಇಂಗ್ಲಿಷ್‌ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆ ಪತ್ರಿಕೆ ಇರಲಿದೆ.