"ಸಿಇಟಿ: ಪರಿಷ್ಕೃತ ಕೀ ಉತ್ತರ ಪ್ರಕಟ, ಭೌತಶಾಸ್ತ್ರದ ಒಂದು ಪ್ರಶ್ನೆಗೆ ಕೃಪಾಂಕ"

ಬೆಂಗಳೂರು: ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಎಲ್ಲಾ ನಾಲ್ಕು ವಿಷಯಗಳ 16 ವರ್ಶನ್‌ಗಳ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. 

 

ಈ ಹಿಂದೆ ಪ್ರಕಟಿಸಿದ ಕೀ ಉತ್ತರಗಳಿಗೆ ಸಾರ್ವಜನಿಕರಿಂದ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯು ಪರಿಶೀಲನೆ ನಡೆಸಿ, ಅವರ ವರದಿಯ ಪ್ರಕಾರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. 

ಭೌತಶಾಸ್ತ್ರದಲ್ಲಿ ಒಂದು ಪ್ರಶ್ನೆಗೆ ಕೃಪಾಂಕ ನೀಡಲಾಗಿದೆ. ರಸಾಯನಶಾಸ್ತ್ರದಲ್ಲಿ ಎರಡು ಮತ್ತು ಜೀವಶಾಸ್ತ್ರದಲ್ಲಿ ಒಂದು ಪ್ರಶ್ನೆಗೆ, ಈ ಹಿಂದೆ ಪ್ರಕಟಿಸಿದ್ದ ಉತ್ತರದ ಜೊತೆಗೆ ಮತ್ತೊಂದು ಉತ್ತರವೂ ಸರಿ ಎಂದು ಸಮಿತಿ ಹೇಳಿದೆ. ಗಣಿತ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಅವರು ವಿವರಿಸಿದ್ದಾರೆ.