ಮುಂದಿನ 4 ದಿನ ಉತ್ತಮ ಮಳೆ ಸಾಧ್ಯತೆ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್

ಮುಂದಿನ 4 ದಿನ ಉತ್ತಮ ಮಳೆ ಸಾಧ್ಯತೆ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್

ಬೆಂಗಳೂರು : ಕಳೆದ ಒಂದು ವಾರದಿಂದ ಸುಮ್ಮನಾಗಿದ್ದ ಮಳೆ ಮತ್ತೆ ಅಬ್ಬರವನ್ನು ಶುರು ಮಾಡಿದ್ದು, ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಮಾನ ಇಲಾಖೆಯ ಪ್ರಕಾರ ದಕ್ಷಿಣ ಒಳನಾಡಿಗೆ ಮುಂಗಾರು ಚುರುಕಾಗಿದ್ದು ಯಲ್ಲೋ ಅಲರ್ಟ್ ನೀಡಿದ್ದು, ಬೆಂಗಳೂರಿಗೆ ಇನ್ನು 5 ದಿನ ಮಳೆ ಇರಲಿದೆ. 

ಇಂದಿನಿಂದ ಆಗಸ್ಟ್​ 31ರವರೆಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಕೆಲ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ 60 ಕಿ.ಮೀ. ವರೆಗೂ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.