ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧಾರವಾಡ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧಾರವಾಡ ಜಿಲ್ಲೆಯಲ್ಲಿ ತಾತ್ಕಾಲಿಕ ಪ್ರವಾಸ ಕೈಗೊಳ್ಳಲಿದ್ದಾರೆ. 
ಜನವರಿ 9 ರಂದು ರಾತ್ರಿ 9:30 ಗಂಟೆಗೆ ಬೀದರದಿಂದ ಹುಬ್ಬಳ್ಳಿಗೆ ವಿಮಾನ ಮೂಲಕ ಬಂದು ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡುವರು. ಜನವರಿ 10 ರಂದು ಬೆಳಿಗ್ಗೆ 10:30 ಗಂಟೆಗೆ ಹುಬ್ಬಳ್ಳಿ ವಿದ್ಯಾನಗರದ ಪಿ.ಸಿ .ಜಾಬಿನ್ ವಿಜ್ಞಾನ ಮಹಾವಿದ್ಯಾಲಯ ಎದುರು ಕಜಾರಿಯಾ ನೂತನ ಮಳಿಗೆ ಉದ್ಘಾಟಿಸುವರು. 

11:30 ಗಂಟೆಗೆ ನವನಗರದ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆ ಆವರಣದಲ್ಲಿ ಕರ್ನಾಟಕ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಏರ್ಪಿಡಿಸಿರುವ ಪದ್ಮಶ್ರೀ ಡಾ.ಆರ್.ಬಿ.ಪಾಟೀಲ ಅವರ ಕಂಚಿನ ಪುತ್ಥಳಿ ಅನಾವರಣ ಮಾಡುವರು. ಮಧ್ಯಾಹ್ನ 12:30 ಗಂಟೆಗೆ ಧಾರವಾಡದ ಹಳಿಯಾಳ ರಸ್ತೆಯಲ್ಲಿರುವ ಮುಗುದುಮ್ ಕಲ್ಯಾಣ ಮಂಟಪದಲ್ಲಿ ತ್ಯಾಗವೀರ ಮಹಾದಾನಿ ಶಿರಸಂಗಿ ಲಿಂಗರಾಜ ದೇಸಾಯಿ ಅವರ 162ನೇ ಜಯಂತಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 2 ಗಂಟೆಗೆ ಧಾರವಾಡ ಪ್ರವಾಸಿ ಮಂದಿರದಲ್ಲಿ ಪ್ರಧಾನ ಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸುವರು. ಸಂಜೆ 5 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.