ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆ ನಿಲ್ಲಲ್ಲ - ಡಿ.ಕೆ ಶಿವಕುಮಾರ್ ಭರವಸೆ
ಚಿಕ್ಕಮಗಳೂರು: ಕಾಂಗ್ರೆಸ್ ಅಧಿಕಾರದಲ್ಲಿ ಇರುವ ತನಕ ಯಾರು ಸಹ ಗ್ಯಾರಂಟಿ ಯೋಜನೆಗಳನ್ನು ತೆಗೆದುಹಾಕಲು ಸಾಧ್ಯವಿಲ್ಲ. ಮುಂದಿನ 10 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ಇರಲಿವೆ. ಕಾಂಗ್ರೆಸ್ ಬಡತನದ ವಿರುದ್ಧ ಯುದ್ದ ಮಾಡುತ್ತದೆ ಹೊರತು ಬಡವರ ವಿರುದ್ಧ ಯುದ್ದ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಇಂದು ನಡೆದ ನಾನಾ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಗಳಿಗೆ ವರ್ಷಕ್ಕೆ 50- 60 ಸಾವಿರ ಉಳಿತಾಯವಾಗುತ್ತಿದೆ. ನಮ್ಮ ಸರ್ಕಾರ ರಚನೆ ಆದ ತಕ್ಷಣ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತೀರ್ಮಾನ ತೆಗೆದುಕೊಂಡೆವು. ಆದ್ರೆ ಮೋದಿಯವರು ಕಪ್ಪು ಹಣ ತಂದು ಎಲ್ಲರ ಬ್ಯಾಂಕ್ ಖಾತೆಗೆ 15 ಲಕ್ಷ ಹಣ ಹಾಕುತ್ತೇನೆ ಎಂದು ಹೇಳಿದರು. ಹಣ ಬಂದಿದೆಯೇ? ಎಂದು ಪ್ರಶ್ನಿಸಿದ್ರು.