ಬೆಂಗಳೂರು : ಚಿನ್ನಸ್ವಾಮಿ ದುರಂತ - ನಾಳೆ ಕೋರ್ಟ್ ಗೆ ವರದಿ ಸಲ್ಲಿಕೆ ಬೆನ್ನಲ್ಲೇ ಸಿಎಂ ನಿವಾಸದಲ್ಲಿ ಸಭೆ

ಬೆಂಗಳೂರು : ರಾಜಧಾನಿಯಲ್ಲಿ ಇನ್ಮುಂದೆ ಕಟ್ಟಡ ನಕ್ಷೆ ಮಂಜೂರಾತಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೆಲವೊಂದು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ಈಗಾಗಲೇ ಆಸ್ತಿ ಖರೀದಿ ಮಾಡುವುದು ಅಥವಾ ಮಾರಾಟ ಮಾಡುವುದಕ್ಕೆ ಇ ಖಾತಾವನ್ನು ಕಡ್ಡಾಯ ಮಾಡಲಾಗಿದೆ. ಇದೀಗ ವಿವಿಧ ಆಸ್ತಿಗಳಿಗೂ ಇ - ಖಾತಾವನ್ನು ಕಡ್ಡಾಯ ಮಾಡುವುದಕ್ಕೆ ಬಿಬಿಎಂಪಿ ಮುಂದಾಗಿದೆ. ಈ ಸಂಬಂಧ ಮಹತ್ವದ ಪ್ರಕಟಣೆಯನ್ನು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೊರಡಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್‌ಲೈನ್ ನಲ್ಲಿ ನೀಡಲಾಗುತ್ತಿದೆ. ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿದೆ. ಇಂತಹ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿದೆ ಎಂದು ಬಿಬಿಎಂಪಿ ಹೇಳಿದೆ.
ಪಾಲಿಕೆಯ ನಗರ ಯೋಜನಾ ವಿಭಾಗದಿಂದ ನಕ್ಷೆ ಮಂಜೂರಾತಿ ನೀಡುತ್ತಿರುವ ಇಒಡಿಬಿ-ಒಬಿಪಿಎಸ್ ಆನ್ ಲೈನ್ ತಂತ್ರಾಂಶವನ್ನು ಪಾಲಿಕೆಯ ಕಂದಾಯ ವಿಭಾಗದಿಂದ ಇ-ಖಾತಾ ನೀಡುತ್ತಿರುವ ಇ-ಆಸ್ತಿ ತಂತ್ರಾಂಶದೊಂದಿಗೆ ಏಕೀಕರಣಗೊಳಿಸಲು ಕ್ರಮ ಜರುಗಿಸಲಾಗಿದೆ. ನಿವೇಶನ /ಸ್ವತ್ತಿನ ಕಂದಾಯ ದಾಖಲಾತಿಗಳ ಪರಿಶೀಲನಾ ತಂತ್ರಾಂಶದಲ್ಲಿ ಸ್ವಯಂಚಾಲಿತವಾಗಿ ಕೈಗೊಳ್ಳಲು ಜುಲೈ.1 ರಿಂದ ಸ್ವತ್ತಿನ ಇ-ಖಾತಾ/ಇಪಿಐಡಿ ಸಂಖ್ಯೆಯನ್ನು ಆನ್‌ಲೈನ್ ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ-ಖಾತಾ ಸಲ್ಲಿಸುವುದು ಅವಶ್ಯವಿರುತ್ತದೆ.