ರಾಜ್ಯ ರಾಜಧಾನಿಗೆ ಇಂದು ಪ್ರಧಾನಿ ಮೋದಿ - ಬೋಯಿಂಗ್ ಇಂಡಿಯಾ ಕಾರ್ಯಕ್ರಮದಲ್ಲಿ ಸಿಎಂ ಕೂಡಾ ಭಾಗಿ

ರಾಜ್ಯ ರಾಜಧಾನಿಗೆ ಇಂದು ಪ್ರಧಾನಿ ಮೋದಿ - ಬೋಯಿಂಗ್ ಇಂಡಿಯಾ ಕಾರ್ಯಕ್ರಮದಲ್ಲಿ ಸಿಎಂ ಕೂಡಾ ಭಾಗಿ

ಬೆಂಗಳೂರು : ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಲಿದ್ದಾರೆ. 

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ದೇವನಹಳ್ಳಿಯಲ್ಲಿ ಮೂಡಿಬಂದಿರುವ ಬೋಯಿಂಗ್‌ನ ಹೊಸ ಅತ್ಯಾಧುನಿಕ ಜಾಗತಿಕ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಆವಿಷ್ಕಾರ ಕ್ಯಾಂಪಸ್ ಅನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಮೋದಿ ಜತೆಗೆ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಪ್ರಧಾನಿ ಮೋದಿಗೆ ಸಂಜೆ 3.55ಕ್ಕೆ ಬೀಳ್ಕೊಡಲಿದ್ದಾರೆ. 

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ 43 ಎಕರೆ ವಿಶಾಲ ಪ್ರದೇಶದಲ್ಲಿ ಅಂತರಿಕ್ಷಯಾನ ತಂತ್ರಜ್ಞಾನ ಸಂಶೋಧನೆ ಮತ್ತು ಅಭಿವೃದ್ಧಿ ಕ್ಯಾಂಪಸ್ ತಲೆ ಎತ್ತಿದೆ. ಬೋಯಿಂಗ್ ಸಹಭಾಗಿತ್ವದ ಏರೋಸ್ಪೇಸ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕೇಂದ್ರ 2018ರಲ್ಲಿ ಕಾರ್ಯಾರಂಭಿಸಿದೆ. ಭಾರತದಲ್ಲಿ ಅಂತರಿಕ್ಷಯಾನ ವಾಣಿಜ್ಯಿಕ ಮತ್ತು ರಕ್ಷಣಾ ಕ್ಷೇತ್ರವು ವಿಪುಲ ಅವಕಾಶಗಳನ್ನು ಸೃಷ್ಟಿಸಿದ್ದು, ಕಳೆದ ವರ್ಷವಷ್ಟೇ 1600 ಕೋಟಿ ರೂ ಬಂಡವಾಳವನ್ನು ಹೂಡಿಕೆ ಬಿಐಇಟಿಸಿ ಸಾಮರ್ಥ್ಯ ವಿಸ್ತರಿಸಿದ್ದು, ಅಂದಾಜು ಐದು ಸಾವಿರ ಉದ್ಯೋಗಳ ಅವಕಾಶಗಳು ಸೃಷ್ಟಿಯಾಗಿವೆ.