ಭದ್ರತಾ ಕ್ರಮದ ಬಗ್ಗೆ ಚರ್ಚಿಸಲು ನಾಳೆ ಡಿಸಿ, ಎಸ್‌ಪಿ, ಹಿರಿಯ ಅಧಿಕಾರಿಗಳ ತುರ್ತು ಸಭೆ ಕರೆದ ಸಿಎಂ

ಬೆಂಗಳೂರು: ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವುದರಿಂದ ದೇಶಾದ್ಯಂತ ಈಗಾಗಲೇ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಭದ್ರತಾ ಕ್ರಮ ಹೆಚ್ಚಿಸಲು ಅಲರ್ಟ್ ಮಾಡಿದೆ. ಇದರ ಬೆನ್ನಲ್ಲೇ ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಮತ್ತು ಎಸ್‌ಪಿಗಳು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ,ನಾಗರಿಕರ ರಕ್ಷಣಾ ಕಾರ್ಯ ಚುಟುವಟಿಕೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತೆ. ಗಡಿಯಲ್ಲಿ ಯುದ್ಧದ ಭೀತಿ ಸೃಷ್ಟಿಯಾಗಿರುವದರಿಂದ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಿಎಂ ಅಗತ್ಯ ಸಲಹೆ ಸೂಚನೆಗಳನ್ನ ಸಭೆಯಲ್ಲಿ ನೀಡಲಿದ್ದಾರೆ.