ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಸಿಎಂ, ಡಿಸಿಎಂ ಹಾಜರು!

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಸಿಎಂ, ಡಿಸಿಎಂ ಹಾಜರು!

ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ ನ ಹನ್ನೊಂದು ‌ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು‌ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನ ಅಭ್ಯರ್ಥಿಗಳು ತಮ್ಮ ತಮ್ಮ‌ ನಾಯಕರೊಂದಿಗೆ ಆಗಮಿಸಿ ನಾಮಪತ್ರವನ್ನು ಸಲ್ಲಿಸಿದರು. 

ಕಾಂಗ್ರೆಸ್ ನಿಂದ ಸಚಿವ ಎನ್.ಎಸ್.ಬೋಸರಾಜ್, ವಸಂತಕುಮಾರ್, ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಐವಾನ್ ಡಿಸೋಜ, ಬಿಲ್ಕಿಸ್ ಬಾನು, ಜಗದೇವ್ ಗುತ್ತೇದಾರ್ ಅವರು ಮಧ್ಯಾಹ್ನದ ವೇಳೆ ವಿಧಾನಸೌಧದ ಮೊದಲ ಮಹಡಿಯಲ್ಲಿ ಚುನಾವಣಾಧಿಕಾರಿಯೂ ಆದ ವಿಧಾನಸಭಾ ಕಾರ್ಯದರ್ಶಿ ವಿಜಯಲಕ್ಷ್ಮೀ ಅವರಿಗೆ ನಾಮಪತ್ರಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು. 

ಇನ್ನು, ಬಿಜೆಪಿ ವತಿಯಿಂದ ಮೂರು ಸ್ಥಾನಗಳಿಗೆ ಸಿ.ಟಿ.ರವಿ, ಎನ್.ರವಿಕುಮಾರ್ ಹಾಗೂ ಡಾ.ಎಂ.ಜಿ.ಮೂಳೆ ಅವರು ಮತ್ತು ಬಿಜೆಪಿ ಬೆಂಬಲಿತ ಜೆಡಿಎಸ್ ನ ಅಭ್ಯರ್ಥಿಯಾಗಿ ಜವರೇಗೌಡ ಅವರು ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸೇರಿದಂತೆ ಮತ್ತಿತರರು ಸಾಥ್ ನೀಡಿದರು.