ಬೆಂಗಳೂರು : ಮಳೆ ಅನಾಹುತ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ; ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

ಬೆಂಗಳೂರು : ಮಳೆ ಅನಾಹುತ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ; ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. 

ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು. ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. 

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ. ಅಲ್ದೇ ಇದೇ ತಿಂಗಳು ಮುಂಗಾರು ಮಳೆ ಕುರಿತಂತೆ ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಲು ಸಿಎಂ ತೀರ್ಮಾನಿಸಿದ್ದಾರೆ.