ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ಟೋಯಿಂಗ್ ನಿರ್ಬಂಧಕ್ಕೆ ಸಿಎಂ ಸೂಚನೆ

ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ಟೋಯಿಂಗ್ ನಿರ್ಬಂಧಕ್ಕೆ ಸಿಎಂ ಸೂಚನೆ

ಬೆಂಗಳೂರು: ವಾಹನ ಟೋಯಿಂಗ್ ವಿಚಾರವಾಗಿ ಸಾರ್ವಜನಿಕರ ಮೇಲೆ ದೌರ್ಜನ್ಯವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಟೋಯಿಂಗ್ ಕ್ರಮವನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶಿಸಿದ್ದಾರೆ. ನಿನ್ನೆ ಸೋಮವಾರ ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕರು, ಆಯುಕ್ತರು ಹಾಗೂ ಸಂಚಾರಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಟೋಯಿಂಗ್ ಕ್ರಮವನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಸೂಚಿಸಿದ್ದಾರೆ. ಇತ್ತೀಚೆಗೆ ವಿಕಲಾಂಗ ಮಹಿಳೆ ಮೇಲೆ ಸಂಚಾರಿ ಎ‌ಎಸ್‌ಐ ಒಬ್ಬರು ಟೋಯಿಂಗ್ ವಿಚಾರವಾಗಿ ಬೂಟುಗಾಲಿನಿಂದ ಒದ್ದು ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು‌. ಹಾಗೂ ಟೋಯಿಂಗ್ ವಿರುದ್ಧ ಜನಸಾಮಾನ್ಯರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.