ಇಸ್ರೋ ಮಾಜಿ ಅಧ್ಯಕ್ಷ ಡಾ ಕೆ ಕಸ್ತೂರಿ ರಂಗನ್ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಸ್ರೋ ಮಾಜಿ ಅಧ್ಯಕ್ಷ ಡಾ ಕೆ ಕಸ್ತೂರಿ ರಂಗನ್ ರವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿದರು.
ಈ ವೇಳೆ ರಾಜಕೀಯ ನಾಯಕರು ಮತ್ತು ಗಣ್ಯರು ಭಾಗಿಯಾಗಿದ್ದರು. ಡಾ ಕೆ ಕಸ್ತೂರಿ ರಂಗನ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದರು.