ಧಾರವಾಡ: ಕೆಸಿಡಿಗೆ ಬರಲಿದ್ದಾರೆ ಸಿಎಂ ಸಿದ್ದು-ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವ ಲಾಡ್

ಧಾರವಾಡ: ಕೆಸಿಡಿಗೆ ಬರಲಿದ್ದಾರೆ ಸಿಎಂ ಸಿದ್ದು-ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವ ಲಾಡ್

ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಧಾರವಾಡ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ, ನೋಂದಾಯಿತ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‍ಟಾಪ್ ವಿತರಣೆ ಹಾಗೂ ಗಿಗ್ ಕಾರ್ಮಿಕರ ನೋಂದಣಿ ಪ್ರಕ್ರಿಯೆ ಚಾಲನಾ ಕಾರ್ಯಕ್ರಮ ಶನಿವಾರ ಸಂಜೆ 6 ಗಂಟೆಗೆ ಕರ್ನಾಟಕ ಕಾಲೇಜು ಮೈದಾನದಲ್ಲಿ ನಡೆಯಲಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಕೆಸಿಡಿ ಮೈದಾನದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಅಲ್ಲದೇ ವಿಕಲಚೇತನರ ತ್ರಿಚಕ್ರ ವಾಹನಗಳು ಈಗಾಗಲೇ ಬಂದಿದ್ದು, ಕಾರ್ಯಕ್ರಮದ ಸಿದ್ಧತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪರಿಶೀಲಿಸಿದರು. 

ಕಾರ್ಯಕ್ರಮದ ಮುಖ್ಯವೇದಿಕೆ, ಆಸನಗಳ ವ್ಯವಸ್ಥೆ, ವಾಹನಗಳ ಪಾರ್ಕಿಂಗ್ ಸೇರಿದಂತೆ ಇತ್ಯಾದಿ ವ್ಯವಸ್ಥೆಗಳ ಕುರಿತು ಸಚಿವ ಲಾಡ್ ಮಾಹಿತಿ ಪಡೆದುಕೊಂಡರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.