ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಬೆನ್ನಲ್ಲೇ ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. ಸಂಜೆ 5 ಗಂಟೆಗೆ ಸಿಎಂ ಕಾವೇರಿ ನಿವಾಸದಲ್ಲಿ ಆರೋಗ್ಯ ಸಚಿವರು ಮತ್ತು ಆರೋಗ್ಯ
ಇಲಾಖೆಯ ಅಧಿಕಾರಿಗಳೊಂದಿಗೆ ಕೋವಿಡ್ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ದಿನದಿಂದ ಹೆಚ್ಚಾಗುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಮುಂಜಾಗ್ರತಾ ಕ್ರಮದ ಬಗ್ಗೆ ಆರೋಗ್ಯ ಸಚಿವ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಈ ಕ್ಷಣಕ್ಕೆ ಏನೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಟೆಸ್ಟಿಂಗ್ ಮತ್ತು ಮಾಸ್ಕ್ ಎಲ್ಲಿ ಕಡ್ಡಾಯಗೊಳಿಸಬೇಕು ಎಂಬ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಆರೋಗ್ಯ ತಜ್ಞರ ಸಲಹೆಗಳ ಮೇಲೆ ರಾಜ್ಯ ಸರ್ಕಾರ ಏನೆಲ್ಲ ಕ್ರಮ ಕೈಗೊಳ್ಳಲಿದೆ ಎಂಬುದು ಸಭೆ ಬಳಿಕ ಸ್ಪಷ್ಟನೆ ಸಿಗಲಿದೆ.