ಕನ್ನಡದ ಸಿನಿಮಾಗಳಿಗೆ ರಾಷ್ಟ್ರೀಯ ಪ್ರಶಸ್ತಿ - ವಿಜೇತರನ್ನ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಪಟ್ಟಿಯಲ್ಲಿ ಕನ್ನಡದ ಸಿನಿಮಾ ಮತ್ತು ನಟರಿಗೆ ರಾಷ್ಟ್ರೀಯ ಪ್ರಶಸ್ತಿ ಲಭಸಿರೋದಕ್ಕೆ ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ. ತಮ್ಮ X ಎಕ್ಸ್ ಖಾತೆಯಲ್ಲಿ ಪ್ರಶಸ್ತಿ ವಿಜೇತರನ್ನ ಅಭಿನಂದಿಸಿದ್ದಾರೆ.
70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಪಟ್ಟಿಯಲ್ಲಿ ಕಾಂತಾರ ಚಿತ್ರದ ನಟನೆಗಾಗಿ ರಿಷಬ್ ಶೆಟ್ಟಿಯವರು, ಕನ್ನಡದ ಅತ್ಯುತ್ತಮ ಚಿತ್ರವಾಗಿ ಕೆ.ಜಿ.ಎಫ್- 2, ಮಧ್ಯಂತರ ಚಿತ್ರದ ಸಂಕಲನಕ್ಕಾಗಿ ಸುರೇಶ್ ಅರಸ್, ಅತ್ಯುತ್ತಮ ಚೊಚ್ಚಲ ನಿರ್ದೇಶಕರಾಗಿ ಮಧ್ಯಂತರ ಕಿರುಚಿತ್ರದ ನಿರ್ದೇಶಕ ಬಸ್ತಿ ದಿನೇಶ್ ಶೆಣೈ ಅವರಿಗೆ ಪ್ರಶಸ್ತಿ ಲಭಿಸಿರುವುದು ಸಂತಸವುಂಟುಮಾಡಿದೆ. X ಖಾತೆಯಲ್ಲಿ ಮೂಲಕ
ಪ್ರಶಸ್ತಿ ವಿಜೇತರೆಲ್ಲರಿಗೂ ಅಭಿನಂದನೆಗಳು ತಿಳಿಸಿದ್ದಾರೆ.. ಅಲ್ದೇ ನಿಮ್ಮೆಲ್ಲರ ಸಾಧನೆ ಚಿತ್ರರಂಗದ ಇತರೆ ಎಲ್ಲಾ ಕಲಾವಿದರಿಗೂ ಪ್ರೇರಣೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಆಶಿಸಿದ್ದಾರೆ.