ನೇಹಾ ಕೊಲೆಗಡುಕನಿಗೆ ಗರಿಷ್ಠ ಶಿಕ್ಷೆಯಾಗುವಂತೆ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ - ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹುಬ್ಬಳ್ಳಿಯಲ್ಲಿ ಅಮಾನವೀಯವಾಗಿ ಹತ್ಯೆಗೊಳಗಾದ ನೇಹಾ ಹಿರೇಮಠ ಕೊಲೆಗಡುಕ ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಮಾಡಬೇಕೆಂದು ನಾನು ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ತಮ್ಮ ಅಧಿಕೃತ "ಎಕ್ಸ್" ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ವೊಂದನ್ನು ಹಾಕಿರುವ ಸಿಎಂ, ಹುಬ್ನಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.