ಹುಬ್ಬಳ್ಳಿ: ಸಂಕ್ರಾಂತಿ ಹಬ್ಬಕ್ಕೆ ಹಾವೇರಿ ಜಿಲ್ಲೆಗೆ ಭೇಟಿ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಸಂಕ್ರಾಂತಿ ಹಬ್ಬಕ್ಕೆ ಹಾವೇರಿ ಜಿಲ್ಲೆಗೆ ಭೇಟಿ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಇಂದು ಸಂಕ್ರಾಂತಿ ಹಬ್ಬದ ದಿನದಂದು ಸಿಎಂ ಸಿದ್ದರಾಮಯ್ಯ ಅವರು ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. 

ಹಾವೇರಿ ತಾಲೂಕಿನ ನರಸೀಪುರ ಗ್ರಾಮದ ನಿಜಶರಣ ಅಂಬುಗರ ಚೌಡಯ್ಯನವರ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ ಬ್ಯಾಡಗಿ ತಾಲೂಕಾ ಚಿಕ್ಕಬಾಸೂರು ಗ್ರಾಮಕ್ಕೆ ಸಿಎಂ ಭೇಟಿ ನೀಡಲಿದ್ದಾರೆ. ಗುರು ಶಿವಯೋಗಿ ಸಿದ್ದಾರಾಮೇಶ್ವರ ಜಯಂತಿಯ ಸಮಾರೋಪ ಸಮಾರಂಭದಲ್ಲಿ ಸಿದ್ದರಾಮಯ್ಯ ಭಾಗಿಯಾಗಿ, ಬಳಿಕ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.