ನಾಳೆ ಆಲಮಟ್ಟಿ ಡ್ಯಾಂಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ

ಬೆಂಗಳೂರು : ಉತ್ತರಕರ್ನಾಟಕದ ಜೀವನದಿಯಾಗಿರುವ ಕೃಷ್ಣ ಮೈದುಂಬಿ ಹರಿಯುತ್ತಿದೆ. ವಿಜಯಪುರ ಜಿಲ್ಲೆಯಲ್ಲಿರುವ ಆಲಮಟ್ಟಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ ಸಲ್ಲಿಸಲಿದ್ದಾರೆ.
ಜಿಲ್ಲೆಯಾದ್ಯಂತ ಉತ್ತಮವಾಗಿ ಮಳೆಯಾದ ಹಿನ್ನೆಲೆಯಲ್ಲಿಆಲಮಟ್ಟಿಯಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯ ಭರ್ತಿಯಾಗಿದೆ. ನಾಳೆ ಮಧ್ಯಾಹ್ನ 12:30ಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬೆಂಗಳೂರಿನಿಂದ ನಾಳೆ ಬೆಳಗ್ಗೆ 10 ಗಂಟೆಗೆ ಹೆಚ್ ಎ ಎಲ್ ನಿಂದ ವಿಶೇಷ ವಿಮಾನ ಮೂಲಕ ಆಲಮಟ್ಟಿಗೆ ತೆರಳಲಿದ್ದಾರೆ. ಆಲಮಟ್ಟಿಯಲ್ಲಿ ಬಾಗಿನ ಅರ್ಪಿಸಿದ ಬಳಿಕ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಇನ್ನು ಸಿಎಂ.ಬಾಗಿನ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಭಾಗಿಯಾಗಲಿದ್ದಾರೆ.