ರಾಜ್ಯದಲ್ಲಿ ಶೀತ, ಜ್ವರ ಇರುವುದು ಸಾಮಾನ್ಯ ಪ್ರಕ್ರಿಯೆ: ಸಚಿವ ಡಾ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಶೀತ, ಜ್ವರ ಜಾಸ್ತಿ ಇದೆ. ಇದು ಸಾಮಾನ್ಯ ಪ್ರಕ್ರಿಯೆ ಆಗಿದೆ. ಇದಕ್ಕೆ ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಸೀಸನಲ್ ಫ್ಲೋ. ಡಿಸೆಂಬರ್ ನಿಂದ ಫೆಬ್ರವರಿವರೆಗೂ ಪ್ರತಿ ವರ್ಷ ಇದು ಸಾಮಾನ್ಯ. ಈ ಲಕ್ಷಣ ಇರೋರಿಗೆ ಆದ್ಯತೆ ಮೇಲೆ ಟೆಸ್ಟ್ ಮಾಡ್ತಿದ್ದೇವೆ. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಾವು ಹೆಚ್ಚು ಟೆಸ್ಟ್ ಮಾಡುತ್ತಿದ್ದೇವೆ. ಬೇರೆ ರಾಜ್ಯದಲ್ಲಿ ಒಂದು ರಾಜ್ಯ ಕಡಿಮೆ 35 ಸಾವು ತೋರಿಸಿದ್ದಾರೆ. ನಮ್ಮಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ. ಆಸ್ಪತ್ರೆಗೆ ಸೇರುವವರ ಪ್ರಮಾಣವೂ ಕಡಿಮೆ ಇದೆ. ನಾವು ಮುಂಚಿತವಾಗಿ ಎಲ್ಲ ಕ್ರಮಗಳನ್ನ ತೆಗೆದುಕೊಳ್ತಿರೋದ್ರಿಂದ ನಮ್ಮಲ್ಲಿ ನಿಯಂತ್ರಣದಲ್ಲಿ ಇದೆ ಎಂದು ಡಾ ಸುಧಾಕರ್ ತಿಳಿಸಿದ್ದಾರೆ.