'ಯಾವುದೇ ಕಾರಣಕ್ಕೂ ಶಾಲಾ ಕಾಲೇಜು ಬಂದ್ ಇಲ್ಲ'

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲಾ ಕಾಲೇಜು ಬಂದ್ ಮಾಡುವುದಿಲ್ಲ. ಎಂದಿನಂತೆ ಶಾಲಾ ಕಾಲೇಜು ತರಗತಿಗಳು ಮುಂದುವರೆಯುತ್ತವೆ. ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಯಾವುದೇ ಗೊಂದಲ ಬೇಡ ಎಂದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮೂರನೇ ಅಲೆ ಹಾಗೂ ಓಮಿಕ್ರಾನ್ ವೈರಸ್ ಬಗ್ಗೆ ಮಾಹಿತಿ ಪಡೆಯಲಾಗಿದೆ. ಆರೋಗ್ಯ ತಜ್ಞರೊಂದಿಗೆ ಚರ್ಚೆ ಮಾಡಲಾಗಿದೆ. ತಜ್ಞರೇ ಹೇಳುವಂತೆ ಫೆಬ್ರವರಿ ಅಂತ್ಯದಲ್ಲಿ ಮೂರನೇ ಅಲೆ ಬರಲಿದೆ ಎಂದಿದ್ದಾರೆ. ಹೀಗಾಗಿ ಶಾಲಾ ಕಾಲೇಜುಗಳಲ್ಲಿ ವಿಶೇಷವಾದ ಎಸ್‌ಓಪಿ ಜಾರಿ ಮಾಡಲಾಗಿದೆ. ಶಾಲಾ, ಕಾಲೇಜುಗಳಲ್ಲಿ ಸ್ವಚ್ಛತೆ, ಸ್ಯಾನಿಟೈಸ್, ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ಮಾಸ್ಕ್ ಇಲ್ಲದಿದ್ರೆ ತರಗತಿಗಳಿಗೆ ಬರಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ. ಇಡೀ ರಾಜ್ಯದ ಎಲ್ಲಾ ಶಾಲಾ-ಕಾಲೇಜು ಮಕ್ಕಳ ಪೋಷಕರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದು, ಪೋಷಕರಿಗೆ ಎರಡು ಡೋಸ್ ಕಡ್ಡಾಯ ಮಾಡಲಾಗಿದೆ. ಎರಡು ಡೋಸ್ ತೆಗೆದುಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆಗೆ ತಿಳಿಸಲಾಗಿದೆ. ಹೀಗಾಗಿ ಪೋಷಕರಿಗೆ ಮನವಿ ಮಾಡಿ ಎರಡು ಡೋಸ್ ತೆಗೆದುಕೊಳ್ಳುವಂತೆ ತಿಳಿ ಹೇಳಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.