ಸೆಪ್ಬೆಂಬರ್ ಮೊದಲ ವಾರದೊಳಗೆ ಆರೋಗ್ಯ ಇಲಾಖೆಯ ವರ್ಗಾವಣೆ ಕೌನ್ಸಿಲಿಂಗ್ ಪೂರ್ಣಗೊಳಿಸಿ - ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಸೆಪ್ಬೆಂಬರ್ ಮೊದಲ ವಾರದೊಳಗೆ ಆರೋಗ್ಯ ಇಲಾಖೆಯ ವರ್ಗಾವಣೆ ಕೌನ್ಸಿಲಿಂಗ್ ಪೂರ್ಣಗೊಳಿಸಿ - ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು: ಸೆಪ್ಟೆಂಬರ್ ಮೊದಲ ವಾರದೊಳಗೆ ಕೌನ್ಸಿಲಿಂಗ್ ವರ್ಗಾವಣೆ ಪೂರ್ಣಗೊಳಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, 8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವರ್ಗದ ನೌಕರರು, ಸಿಬ್ಬಂದಿಯ ವರ್ಗಾವಣೆ ಕೌನ್ಸಿಲಿಂಗ್ ಮೂಲಕ ನಡೆಯುತ್ತಿದೆ. ಶೀಘ್ರಗತಿಯಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. 

ಸೆಪ್ಟೆಂಬರ್ ಮೊದಲ‌ ವಾರದಲ್ಲಿ ವೈದ್ಯಾಧಿಕಾರಿಗಳ ಜ್ಯೇಷ್ಠತಾ ಪಟ್ಟಿ ತಯಾರಾಗಬೇಕು. ಹಲವು ವೈದ್ಯರು ಕೌನ್ಸಿಲಿಂಗ್ ಎದುರು ನೋಡುತ್ತಿದ್ದಾರೆ. ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ವಿಳಂಬವಾಗಬಾರದು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಇನ್ನು ಇಲಾಖೆಯಲ್ಲಿ ಕಾರ್ಯನಿರಗವಹಿಸುವ ಹೊರಗುತ್ತಿಗೆ ನೌಕರರಿಗೆ ಏಕರೂಪ ವೇತನ ಜಾರಿ ಕುರಿತು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.