ಮತ್ತೆ ಕಾಂಗ್ರೆಸ್ ನಿಂದ ಪಾದಯಾತ್ರೆ

ಆಗಸ್ಟ್ 9 ರಿಂದ 15ರ ವರೆಗೆ ಬೆಂಗಳೂರು ಸೇರಿದಂತೆ ಅನೇಕ ಭಾಗಗಳಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಟ್ವೀಟ್ ಮಾಡಿದ್ದಾರೆ.
ಪ್ರಾಂತೀಯವಾಗಿ ಪ್ರತ್ಯೇಕ ಪ್ರಣಾಳಿಕೆ ತಯಾರಿಸಲು ನಿರ್ಧರಿಸಿದ್ದೇವೆ. ಜನಸ್ನೇಹಿ ಸರ್ಕಾರದ ಮೂಲಕ ಉತ್ತಮ ಆಡಳಿತ ನೀಡುವುದೇ ನಮ್ಮ ಗುರಿ. BJP ದೋಷಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಶ್ರಮ ವಹಿಸಿ ಕೆಲಸ ಮಾಡುವತ್ತ ಗಮನಹರಿಸೋಣ ಎಂದಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಶತಾಯ ಗತಾಯ ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿರುವ ಕಾಂಗ್ರೆಸ್ ವಿವಿಧ ಕೆಲಸ ಕಾರ್ಯಗಳನ್ನು ಕೈಗೊಳ್ಳುತ್ತಿದೆ.