ಹಾನಗಲ್ ನಲ್ಲಿ ಜಯಭೇರಿ ಬಾರಿಸಿದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ

ಹಾವೇರಿ : ಹಾನಗಲ್ ಕ್ಷೇತ್ರದಲ್ಲಿ ಫಲಿತಾಂಶದ ಮುನ್ನವೇ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿ ಸಂಭ್ರಮಿಸುತ್ತಿದ್ದರು. ಇದೀಗ ಅಧಿಕೃತ ಫಲಿತಾಂಶ ಹೊರಬಿದ್ದಿದ್ದು ವಿಜಯದ ಮಾಲೆಗೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಕೊರಳೊಡ್ಡಿದ್ದಾರೆ. ಹತ್ತು ಸಾವಿರಕ್ಕೂ ಅಧಿಕ ಮತಗಳಿಂದ ಗೆಲ್ಲುವ ವಿಶ್ವಾಸವಿತ್ತು, ಅದು ಫಲಿತಾಂಶದಲ್ಲಿ ಪ್ರತಿಬಿಂಬಿತವಾಗ್ತಿದೆ. ಮುಖ್ಯಮಂತ್ರಿ ಆದಿಯಾಗಿ ಸಚಿವ ಸಂಪುಟವೇ ಇಲ್ಲಿತ್ತು ಆದರೂ ಜನಬಲಕ್ಕೆ ಗೆಲುವಾಗಿದೆ. ಕಾಂಗ್ರೆಸ್ ಗೆಲುವು ನಮ್ಮ ಕಾರ್ಯಕರ್ತರಲ್ಲಿ ಹುರುಪು ಮೂಡಿಸಿದೆ.ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಹೋರಾಡುತ್ತೇನೆ, ಪ್ರಣಾಳಿಕೆಯ ಅಂಶಗಳನ್ನು ಜಾರಿಗೆ ತರಲು ಯತ್ನಿಸುತ್ತೇನೆ ಎಂದು ಜನರಿಗೆ ಧನ್ಯವಾದ ಅರ್ಪಿಸಿದರು.