ರಾಜ್ಯಕ್ಕೆ ಪ್ರಧಾನಿ ಆಗಮನ ಹಿನ್ನೆಲೆ ಕಾಂಗ್ರೆಸ್ ಸಮಿತಿ ಸಭೆ ಮಧ್ಯಾಹ್ನದ ಬದಲು ಸಾಯಂಕಾಲಕ್ಕೆ

ರಾಜ್ಯಕ್ಕೆ ಪ್ರಧಾನಿ ಆಗಮನ ಹಿನ್ನೆಲೆ ಕಾಂಗ್ರೆಸ್ ಸಮಿತಿ ಸಭೆ ಮಧ್ಯಾಹ್ನದ ಬದಲು ಸಾಯಂಕಾಲಕ್ಕೆ

ಬೆಂಗಳೂರು: ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯನ್ನು ನಾಳೆ ಸಂಜೆ 4:30ಕ್ಕೆ ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಸಲಾಗುವುದು ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. 

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯನ್ನು ಶುಕ್ರವಾರ ಮಧ್ಯಾಹ್ನ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಪ್ರಧಾನ ಮಂತ್ರಿಯವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಕಾರಣ ನಮ್ಮ ಸಭೆಯನ್ನು ಸಂಜೆಗ ಮುಂದೂಡಬೇಕಾಯಿತು ಅಂತ ತಿಳಿಸಿದರು. 

ನಾಳೆಯ ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಆಗಲ್ಲ. ಆದರೆ, ಈ ಬಗ್ಗೆ ಮೊದಲ ಸುತ್ತಿನ ಚರ್ಚೆ ನಡೆಯಲಿದೆ. ನಾಳಿನ ಸಭೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರನ್ನು ಆಹ್ವಾನಿಸಲಾಗಿದ್ದು, ಉಳಿದಂತೆ ಈ ಹಿಂದೆ ಚುನಾವಣಾ ಸಮಿತಿಯಲ್ಲಿದ್ದವರೇ ಇರುತ್ತಾರೆ ಎಂದರು. 

ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲ ಕ್ಷೇತ್ರಗಳಿಗೆ ಹೋಗಿ ನಮ್ಮ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸುದ್ದು, ಈ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.