ಬ್ರೇಕಿಂಗ್ : ಹೃದಯಾಘಾತದಿಂದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಇನ್ನಿಲ್ಲ

ಬ್ರೇಕಿಂಗ್ : ಹೃದಯಾಘಾತದಿಂದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಇನ್ನಿಲ್ಲ

ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತೀವ್ರ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. AICC ಅರ್ಧಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರ ಆಪ್ತರಾಗಿದ್ದ ಇವರು, ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. 

ಕಾಂಗ್ರೆಸ್‌ ಪಕ್ಷದಿಂದ ರಾಜಕೀಯ ಪ್ರವೇಶಿಸಿ 4 ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಹಿರಿಯ ಕಾಂಗ್ರೆಸ್‌ ನಾಯಕರೆನಿಸಿಕೊಂಡಿದ್ದರು.