ಬೆಂಗಳೂರು : ಕಾಂಗ್ರೆಸ್ ಪ್ರಣಾಳಿಕಾ ರಚನಾ ಸಮಿತಿಗೆ ಸಿಎಂ ಸಿದ್ದರಾಮಯ್ಯ ಸೇರ್ಪಡೆ

ಬೆಂಗಳೂರು : ಕಾಂಗ್ರೆಸ್ ಪ್ರಣಾಳಿಕಾ ರಚನಾ ಸಮಿತಿಗೆ ಸಿಎಂ ಸಿದ್ದರಾಮಯ್ಯ ಸೇರ್ಪಡೆ

ಬೆಂಗಳೂರು : ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ಕಾಂಗ್ರೆಸ್ ಪ್ರಣಾಳಿಕೆ ರಚನಾ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿ ಪ್ರಕಟಣೆ ಹೊರಡಿಸಿದೆ. 

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಎಐಸಿಸಿಗೆ ಆಭಾರಿಯಾಗಿರುವೆ ಎಂದಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಚನೆಯಾದ ಹದಿನಾರು ಸದಸ್ಯರ ಪ್ರಣಾಳಿಕೆ ಸಮಿತಿಯ ಚೇರ್ಮನ್ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಚಿದಂಬರ್, ಇನ್ನುಳಿದಂತೆ ಪ್ರಿಯಾಂಕಾ ಗಾಂಧಿ ವಾದ್ರಾ, ಶಶಿ ತರೂರ್, ಆನಂದ ಶರ್ಮಾ ಸೇರಿ ಸಮಿತಿಯಲ್ಲಿ ಮೊದಲಾದವರಿದ್ದಾರೆ.