ನವದೆಹಲಿ : ಮೇಲ್ಮನೆ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಗೆ 'ಕೈ' ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ : ಮುಂಬರುವ ವಿಧಾನಪರಿಷತ್‌ನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಕೆ.ಕೆ.ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಟಿ.ಡಿ.ಶ್ರೀನಿವಾಸ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿಗೌಡ, ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ್ ಬಿ.ಪಾಟೀಲ್‌ರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.