ಕಾರವಾರ : ಮುಂದುವರೆದ ಮಳೆ - ಕೆಲವು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಪರಿಣಾಮ ಜುಲೈ 6 ರಂದು ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.
ಕಾರವಾರ, ಕುಮಟಾ, ಹೊನ್ನಾವರ, ಅಂಕೋಲಾ ಹಾಗೂ ಭಟ್ಕಳ ತಾಲೂಕಿನ ಸರಕಾರಿ ಹಾಗೂ ಅನುದಾನಿತ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತವು ರಜೆ ಘೋಷಣೆ ಮಾಡಿದೆ.