ನವದೆಹಲಿ: ಕೊರೊನಾ ನಿರೋಧಕ ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಚಿಂತನೆ ನಡೆಸಿಲ್ಲ. ಈಗ ನೀಡಲಾಗುತ್ತಿರುವ 2 ಡೋಸ್ ಲಸಿಕೆ ನೀಡುವುದು ನಮ್ಮ ಮುಂದಿರುವ ಆದ್ಯತೆ ಎಂದು ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ್ ತಿಳಿಸಿದ್ದಾರೆ.

ಈ ಸಮಯದಲ್ಲಿ ಬೂಸ್ಟರ್ ಡೋಸ್ ನೀಡುವುದು ಕೇಂದ್ರದ ವಿಷಯವಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸುತ್ತೇನೆ. ಆದ್ರೆ ಎರಡೂ ಡೋಸ್‌ಗಳನ್ನು ನೀಡುವುದು ಅತ್ಯಗತ್ಯ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಭಾರ್ಗವ ಹೇಳಿದರು. 

ಪ್ರತಿಕಾಯಗಳ ಮಟ್ಟವನ್ನು ಅಳೆಯಬಾರದು ಎಂದು ಹಲವಾರು ಏಜೆನ್ಸಿಗಳು ಶಿಫಾರಸು ಮಾಡಿವೆ. ಆದರೆ ಮುಖ್ಯವಾದ ತಿಳುವಳಿಕೆಯೆಂದರೆ ಎರಡೂ ಡೋಸ್‌ಗಳಿಗೆ ಸಂಪೂರ್ಣ ವ್ಯಾಕ್ಸಿನೇಷನ್ ಮಾಡುವುದು ಅತ್ಯಗತ್ಯ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಹೇಳಿದರು. 

ಕೋವಿಡ್ -19 ಬೂಸ್ಟರ್ ಡೋಸ್ ನೀಡುವ ಬಗ್ಗೆ ಚಿಂತನೆ ನಡೆಸಿಲ್ಲ: ಐಸಿಎಂಆರ್