ರಾಜ್ಯದಲ್ಲಿ ಕೊರೊನಾ ಸ್ಫೋಟ : 78 ಜನರಿಗೆ ಅಂಟಿದ ಸೋಂಕು 1 ಬಲಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು ಇಂದು (ಶುಕ್ರವಾರ) ಒಂದೇ ದಿನ 78 ಕೇಸ್ ಪತ್ತೆಯಾಗಿವೆ. ಇನ್ನು ಇದೇ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 175 ಕ್ಕೆ ಏರಿಕೆಯಾಗಿದೆ. ಕೋವಿಡ್-19 ರಿಂದ ಗುಣಮುಖರಾಗಿ ಇಂದು 7 ಜನ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.29 % ಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 68 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದ್ದು, ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ. ರಾಜಧಾನಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 156 ಕ್ಕೆ ತಲುಪಿದೆ.
ಶುಕ್ರವಾರ ಬೆಂಗಳೂರು ಗ್ರಾಮಾಂತರದಲ್ಲಿ 1, ಚಿಕ್ಕಮಗಳೂರಿನಲ್ಲಿ 4, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ಮೈಸೂರಿನಲ್ಲಿ 1, ರಾಮನಗರದಲ್ಲಿ 2 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.