ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಕೊರೊನಾ ಪಾಸಿಟಿವ್

ನವದೆಹಲಿ: ದೆಹಲಿಯಲ್ಲಿ ಕೊರೊನಾ ಸೋಂಕಿನ ಹರಡುವಿಕೆ ತೀವ್ರಗತಿಯಲ್ಲಿದೆ. ಈ ನಡುವೆ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಅರವಿಂದ ಕೇಜ್ರಿವಾಲ್, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚಿನ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.