ದೇಶದಲ್ಲಿ 24 ಗಂಟೆಯಲ್ಲಿ 30,773 ಹೊಸ ಕೋವಿಡ್ ಕೇಸ್ ಪತ್ತೆ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,773 ಕೊರೊನಾ ಕೇಸ್ ಗಳು ಪತ್ತೆಯಾಗಿವೆ., ಇದೇ ಅವಧಿಯಲ್ಲಿ 309 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 3,34,48,163ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,44,838ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,32,158ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 38,945 ಮಂದಿ ಗುಣಮುಖರಾಗುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,26,71,167ಕ್ಕೆ ತಲುಪಿದೆ. ಇದುವರೆಗೆ 55,23,40,168 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 80,43,72,331 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.