ಕೋವಿಡ್ ಕೇರ್ ಕೇಂದ್ರವನ್ನು ಉದ್ಘಾಟಿಸಿದ ಸಚಿವ ಜಗದೀಶ ಶೆಟ್ಟರ್

ಹುಬ್ಬಳ್ಳಿ: ವಿಶ್ವಕ್ಕೆ ಕಂಟಕವಾದ ಕೊರೊನಾ ಸೋಂಕಿಗೆ ಭಯಪಡದೆ ಜಾಗೃತರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ನಗರದ ಅಂಜುಮನ್ ಎ ಇಸ್ಲಾಂ ಸಂಸ್ಥೆಯು ನಗರದ ನೆಹರು ಕಾಲೇಜಿನ ಮಹಿಳಾ ಹಾಸ್ಟೆಲ್ ನಲ್ಲಿ ಆರಂಭಿಸಿರುವ 150 ಹಾಸಿಗೆಗಳ ಕೋವಿಡ್ ಕೇರ್ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
'ಕೊರೊನಾ ತಡೆಯಲು ಕೇವಲ ಸರ್ಕಾರದ ಪ್ರಯುತ್ನಗಳಷ್ಟೇ ಸಾಲದು. ಅದಕ್ಕೆ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಕಾರವೂ ಬೇಕು. ಈ ನಿಟ್ಟಿನಲ್ಲಿ ಅಂಜುಮನ್ ಸಂಸ್ಥೆಯು ಕೋವಿಡ್ ಕೇರ್ ಕೇಂದ್ರ ಆರಂಭಿಸಿ ಎಲ್ಲರಿಗೂ ಮಾದರಿಯಾಗಿದೆ' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ, ಶಾಸಕಿ ಕುಸುಮಾವತಿ ಶಿವಳ್ಳಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಉಪ ವಿಭಾಗಾಧಿಕಾರಿ ಮಹ್ಮದ ಜುಬೇರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.