ಬ್ರೇಕಿಂಗ್: ಎಂಎಲ್‌ಸಿ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ರಾಜೀನಾಮೆ

ಬ್ರೇಕಿಂಗ್: ಎಂಎಲ್‌ಸಿ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ರಾಜೀನಾಮೆ

ಹುಬ್ಬಳ್ಳಿ: ಬಿಜೆಪಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ. ಯೋಗೇಶ್ವರ್ ರಾಜೀನಾಮೆ ಸಲ್ಲಿಸಿದ್ದಾರೆ. 

ಚನ್ನಪಟ್ಟಣ ಎನ್‌ಡಿಎ ಟಿಕೆಟ್ ಗೊಂದಲ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಅವರು ಇಂದು ಸಂಜೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ತೆರಳಿದರು. ಈ ವೇಳೆ ಸಿ.ಪಿ. ಯೋಗೇಶ್ವರ್ ಅವರು ತಮ್ಮ ಲೆಟರ್‌ ಹೆಡ್‌ನಲ್ಲಿ, 'ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ' ಎಂಬ ಬರೆದು ಒಂದು ಸಾಲಿನಲ್ಲೇ ರಾಜೀನಾಮೆಯನ್ನು ಬಸವರಾಜ ಹೊರಟ್ಟಿ ಅವರಿಗೆ ಸಲ್ಲಿಸಿದ್ದಾರೆ.