ಅಕಾಲಿಕ ಮಳೆಯಿಂದ ಹಾನಿ: ಪರಿಶೀಲನೆ ಮತ್ತು ಪರಿಹಾರಕ್ಕಾಗಿ ಸರಕಾರದಿಂದ ಸುತ್ತೋಲೆ

ಅಕಾಲಿಕ ಮಳೆಯಿಂದ ಹಾನಿ: ಪರಿಶೀಲನೆ ಮತ್ತು ಪರಿಹಾರಕ್ಕಾಗಿ ಸರಕಾರದಿಂದ ಸುತ್ತೋಲೆ

ಬೆಂಗಳೂರು: ರಾಜ್ಯದ ಹಲವೆಡೆ ಅಕಾಲಿಕ ಮಳೆಯ ಪರಿಣಾಮ ವಿವಿಧೆಡೆ ಪ್ರವಾಹ ಉಂಟಾಗಿ ಆಸ್ತಿ-ಪಾಸ್ತಿ ಹಾನಿಯಾಗಿವೆ. ಈ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಸರಕಾರ ಸುತ್ತೋಲೆ ಹೊರಡಿಸಿದೆ. 

ರಾಜ್ಯ ಕಂದಾಯ ಇಲಾಖೆಯ ಸರ್ಕಾರ ಅಪರ ಮುಖ್ಯ ಕಾರ್ಯದರ್ಶಿ ಹೊರಡಿಸಿರುವ ಸುತ್ತೋಲೆಯಲ್ಲಿ, ಮನೆ ಹಾನಿಪರಿಹಾರವನ್ನು ಪಾವತಿಸಲು ದಿನಾಂಕ 02-08-2022ರ ಸರ್ಕಾರಿ ಪತ್ರದಲ್ಲಿ ತಿಳಿಸಿರುವುದನ್ನು ಮಾರ್ಪಡಿಸಿ, 2019, 2020 ಮತ್ತು 2021ನೇ ಸಾಲಿನಲ್ಲಿ ಭಾಗಶ ಹಾನಿಯಾದ ಸಿ ವರ್ಗದಲ್ಲಿ ₹50 ಸಾವಿರದಂತೆ ಮನೆ ಪರಿಹಾರ ಪಡೆದಿರುವ ಮನೆಗಳು ಪುನಹ 2022ನೇ ಸಾಲಿನಲ್ಲಿ ಜಂಟಿ ಸಮೀಕ್ಷೆ ಅನುಸಾರ ಅತಿವೃಷ್ಠಿಯಿಂದ ಎ, ಬಿ ಮತ್ತು ಸಿ ವರ್ಗದಲ್ಲಿ ಹಾನಿಯಾದಲ್ಲಿ ಪರಿಹಾರ ಪಾವತಿಸುವಂತೆ ತಿಳಿಸಿದೆ. 

ಅತಿವೃಷ್ಟಿಯಿಂದ ರಾಜ್ಯದ ಬಹುತೇಕ ಕೆರೆ ತುಂಬಿ ಹರಿಯುತ್ತಿವೆ. ಇದರಿಂದ ಕೃಷಿ ಭೂಮಿಯಲ್ಲಿ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿರುವುದು ಕಂಡು ಬಂದಿದೆ. ಇದಕ್ಕೆ ಕೇಂದ್ರ ಸರ್ಕಾರದ ಎನ್ ಡಿ ಆರ್ ಎಫ್ ಮಾರ್ಗಸೂಚಿಯ ಅನ್ವಯ ಪರಿಹಾರ ಪಾವತಿಸಲು ಅವಕಾಶವಿದೆ. ಜಿಲ್ಲಾಧಿಕಾರಿಗಳು ಈ ಪ್ರಕರಣಗಳನ್ನು ಕೂಲಕಂಷವಾಗಿ ಪರೀಶಿಲಿಸಿ, ಪರಿಹಾರ ಪಾವತಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.