ಮುಂಗಾರು ಅಧಿವೇಶನಕ್ಕೆ ಡೇಟ್ ಫಿಕ್ಸ್ ; ಸೆಪ್ಟೆಂಬರ್ ನಲ್ಲಿ ನಡೆಯಲಿದೆ ಕಲಾಪ

ಬೆಂಗಳೂರು ; ರಾಜ್ಯ ಮುಂಗಾರು ಅಧಿವೇಶನ ಸೆಪ್ಟೆಂಬರ್ 21 ರಿಂದ 30ರ ವರೆಗೆ ನಡೆಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕು ಕಾರಣದಿಂದಾಗಿ ಕಳೆದ ಬಾರಿ ಬೇಸಿಗೆ ಅಧಿವೇಶನವನ್ನು ರಾಜ್ಯದಲ್ಲಿ ಮುಂದೂಡಲಾಗಿತ್ತು.
ಈ ವೇಳೆ ಸುಗ್ರೀವಾಜ್ಞೆ ಮೂಲಕ ಬಿ.ಎಸ್. ಯಡಿಯೂರಪ್ಪ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಯನ್ನು ಅಂಗೀಕಾರ ಪಡೆದಿತ್ತು.
ಇದು ಸಾಮಾನ್ಯವಾಗಿ ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು.
ವಿರೋಧ ಪಕ್ಷಗಳ ಅಭಿಪ್ರಾಯ ಕೇಳದೆ ಚರ್ಚೆಯಾಗದೆ ಈ ಎರಡೂ ಕಾಯ್ದೆಯನ್ನು ಕೊರೊನಾ ಸಂದರ್ಭದಲ್ಲಿ ಸುಗ್ರೀವಾಜ್ಞೆ ಮೂಲಕ ಅಂಗೀಕಾರಪಡೆಯುವ ಅಗತ್ಯ ಏನಿತ್ತು? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಕಟುವಾಗಿ ವಿಮರ್ಶೆ ಮಾಡಿದ್ದರು.
ಅಲ್ಲದೆ ಶೀಘ್ರದಲ್ಲೇ ಅಧಿವೇಶನ ಕರೆಯುವಂತೆ ಒತ್ತಾಯಿಸಿದ್ದರು.
ಹೀಗಾಗಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸಭೆ ಅಧಿವೇಶನ ನಡೆಸುವ ಕುರಿತು ಚರ್ಚೆ ನಡೆಸಲಾಗಿತ್ತು.
ಈ ವೇಳೆ ಎಲ್ಲಾ ಸಚಿವರುಗಳ ಅಭಿಪ್ರಾಯ ಪಡೆದು ಸೆಪ್ಟೆಂಬರ್ 21 ರಿಂದ 30ರ ವರೆಗೆ ಮುಂಗಾರು ಅಧಿವೇಶನ ನಡೆಸಲು ಒಮ್ಮತದಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.