ನಾಳೆಯೂ ಧಾರವಾಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ

ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಜುಲೈ 25 ಹಾಗೂ 26 ರಂದು ಎರಡು ದಿನಗಳ ಕಾಲ ಧಾರವಾಡ ಜಿಲ್ಲೆಯ ಎಲ್ಲ ಅನುದಾನಿತ, ಅನುದಾನ ರಹಿತ, ಸರ್ಕಾರಿ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದರು.
ಮಳೆ ಎಂದಿನಂತೆ ಸುರಿಯುತ್ತಿರುವ ಕಾರಣ ಜುಲೈ 27 ರಂದೂ ರಜೆ ಘೋಷಣೆ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆಯೂ ಅಂದರೆ ಜುಲೈ 27 ರಂದು ಧಾರವಾಡ ಜಿಲ್ಲೆಯ ಎಲ್ಲ ಅನುದಾನಿತ, ಅನುದಾನ ರಹಿತ ಹಾಗೂ ಸರ್ಕಾರಿ ಶಾಲಾ, ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶ ಹೊರಡಿಸಿದ್ದಾರೆ.