ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಹೈದರಾಬಾದ್ : ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರಾಗಿದ್ದು ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೈದರಾಬಾದ್ ನಲ್ಲಿ ಬಿಗ್ ಬಿ ಮತ್ತು ಪ್ರಭಾಸ್ ಅಭಿನಯದ ‘ಪ್ರಾಜೆಕ್ಟ್ ಕೆ’ ಚಿತ್ರೀಕರಣದ ವೇಳೆ ದೀಪಿಕಾ ಅನಾರೋಗ್ಯಕ್ಕೆ ಈಡಾಗಿದ್ದಾರೆ. ಶೂಟಿಂಗ್ ವೇಳೆ ದೀಪಿಕಾ ಅವರು ಎದೆಬಡಿತ ಇದ್ದಕ್ಕಿದ್ದಂತೆ ಏರಿಕೆಯಾಗಿತ್ತು ಎಂದು ತಿಳಿದು ಬಂದಿದೆ. ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.