ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಹಠಾತ್

ಏರುಪೇರು : ಆಸ್ಪತ್ರೆಗೆ ದಾಖಲು
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಹಠಾತ್ ಏರುಪೇರಾಗಿದ್ದು ನಿನ್ನೆ (ಸೆಪ್ಟೆಂಬರ್ 26) ತಡರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ವರದಿಗಳ ಪ್ರಕಾರ, ಇಂದು ದೀಪಿಕಾ ಪಡುಕೋಣೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.ಇನ್ನು ಏಕಾಏಕಿ ಆಸ್ಪತ್ರೆಗೆ ದಾಖಲಾದ ದೀಪಿಕಾರಿಗೆ ವಿವಿಧ ಟೆಸ್ಟ್ ಗಳನ್ನು ಮಾಡಲಾಗಿದ್ದು ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಕೆಲವು ತಿಂಗಳುಗಳ ಹಿಂದೆ ನಟಿ ದೀಪಿಕಾ ಪಡುಕೋಣೆ ಅನಾರೋಗ್ಯಕ್ಕೀಡಾಗಿದ್ದರು. ಹಾರ್ಟ್ ರೇಟ್‌ನಲ್ಲಿ ಏರುಪೇರು ಉಂಟಾದ ಕಾರಣ ಅವರನ್ನು ಹೈದರಾಬಾದ್‌ನ ಆಸ್ಪತ್ರೆಯಲ್ಲಿ ನಿಗಾ ಇರಿಸಲಾಗಿತ್ತು.